JNANASELE |
ಕೌಲಾಲಂಪುರ: ಭಾರತದ 67ನೇ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.
ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಆಹ್ವಾನವನ್ನು ಫ್ರಾನ್ಸ್ ಅಧ್ಯಕ್ಷರು ಒಪ್ಪಿಕೊಂಡಿದ್ದು, ಮುಂದಿನ ವರ್ಷ January 26ರಂದು ನಡೆಯುವ 67ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಹೊಲಾಂಡೆ ಅವರು ಆಗಮಿಸಲಿದ್ದಾರೆ.
ಮೂರು ದಿನಗಳ ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಬಲಿಷ್ಠ ಪ್ರಾದೇಶಿಕ ಒಕ್ಕೂಟಗಳಾದ ಆಸಿಯಾನ್, ಭಾರತ ಹಾಗೂ ಪೂರ್ವ ಏಷ್ಯಾದ 13ನೇ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಬಳಿಕ ಉಗ್ರರ ದಾಳಿಗೆ ಒಳಗಾಗಿರುವ ಫ್ರಾನ್ಸ್ ನ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸುವಂತೆ ಆಹ್ವಾನ ನೀಡುವ ಮೂಲಕ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಕಳೆದ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅದ್ಯಕ್ಷ ಬರಾಕ್ ಒಬಾಮಾ ಅವರು ಆಗಮಿಸಿದ್ದರು.
No comments:
Post a Comment
Note: only a member of this blog may post a comment.