ಚಿತ್ರದುರ್ಗ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿಯೋಜನೆಯ ಅನುಷ್ಠಾನಕ್ಕೆ ವಿಶಿಷ್ಠ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ರಾಜ್ಯದ ಚಿತ್ರದುರ್ಗ ಜಿಲ್ಲೆಯು ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.
ಜಿಲ್ಲಾ ಮಟ್ಟದಲ್ಲಿ ನರೇಗಾ ಅನುಷ್ಠಾನವನ್ನು ದಕ್ಷ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಕ್ಕಾಗಿ ರಾಷ್ಟ್ರದಲ್ಲಿ ಒಟ್ಟು 6 ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದ್ದು, ಅದರಲ್ಲಿ ಕರ್ನಾಟದ ಚಿತ್ರದುರ್ಗ ಜಿಲ್ಲೆಯು ಸೇರಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಕರ್ನಾಟದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ತಿಳಿಸಿದ್ದಾರೆ.
ನರೇಗಾ ಅನುಷ್ಠಾನದಲ್ಲಿ ರಾಜ್ಯದ ಜಿಲ್ಲೆಯೊಂದಕ್ಕೆ ಪ್ರಶಸ್ತಿ ದೊರಕುತ್ತಿರುವುದು ಇದೇ ಮೊದಲು. ಈ ಪ್ರಶಸ್ತಿಯನ್ನು ಮಂಗಳವಾರ ನವದೆಹಲಿಯ ವಿಗ್ಯಾನ ಭವನದಲ್ಲಿ ನಡೆಯುವ ನರೇಗಾ ಸಮಾರಂಭದಲ್ಲಿ ಆಯ್ಕೆಯಾದ ಜಿಲ್ಲೆಯ ಪ್ರತಿನಿಧಿಗೆ ನೀಡಲಾಗುತ್ತದೆ.
No comments:
Post a Comment
Note: only a member of this blog may post a comment.