THE ULTIMATE GK BLOG FOR CET PREPARATION WITH EDUCATIONAL UPDATES, GENERAL KNOWLEDGE, CURRENT AFFAIRS, GOVT.NOTIFICATIONS,NEWS UPDATES and MUCH MORE..!
ಮುಖ್ಯಮಂತ್ರಿ ಯಡಿಯೂರಪ್ಪ ಅವರು 2020-2021ನೇ ಸಾಲಿನ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿರುವ ಪ್ರಮುಖ ಅಂಶಗಳು:
ಕೃಷಿ:
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.
ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ
ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 FPO ರಚನೆ, FPO ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು.
ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ.
ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನ.
ಕೃಷಿ ಹಾಗೂ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಹೊಸ ಕೃಷಿ ನೀತಿ ಅನುಷ್ಠಾನ.
ʼಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆʼ ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ. ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ.ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು ಬಿಡುಗಡೆಗೆ 900 ಕೋಟಿ ರೂ.
ಮಣ್ಣು, ನೀರು ಪರೀಕ್ಷೆ ಮತ್ತು ರೈತರಿಗೆ ತಾಂತ್ರಿಕ ನೆರವು ನೀಡಲು ʼಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ʼ ಪ್ರಾರಂಭ.
ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ರೂ. ಅನುದಾನ.
ಹಾಪ್‍ಕಾಮ್ಸ್ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು
ರೈತರಿಗೆ ಪ್ರದೇಶವಾರು ಸೂಕ್ತ ಬೆಳೆಯನ್ನು ಬೆಳೆಯಲು, ಅಗತ್ಯ ಬೀಜಗಳು, ರಸಗೊಬ್ಬರಗಳು, ಸಣ್ಣ ಪೌಷ್ಟಿಕಾಂಶಗಳ ಬಳಕೆಗೆ ಮಾರ್ಗದರ್ಶನ ನೀಡಲು ಹೊಸ ನೀತಿ ರಚನೆ.
ಸುಜಲಾ-III ಯೋಜನೆಯನ್ನು ಜಾರಿಗೊಳಿಸಿರುವ 12 ಮಳೆ ಆಶ್ರಿತ ಜಿಲ್ಲೆಗಳ 2500 ಗ್ರಾಮಗಳ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಭೂ ಸಂಪನ್ಮೂಲ ಕುರಿತು ತರಬೇತಿ ನೀಡಿ, ಕಾರ್ಡ್ ವಿತರಿಸಲು 10 ಕೋಟಿ ರೂ. ಅನುದಾನ.
ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಬಾಕಿ ಕಾಮಗಾರಿ ಪೂರ್ಣಗೊಳಿಸುವುದು
ತೋಟಗಾರಿಕೆ ಉತ್ಪನ್ನಗಳ ಸಮರ್ಪಕ ನಿರ್ವಹಣೆಗೆ ವಿವಿಧ ಜಿಲ್ಲೆಗಳ 10 ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ 5000 ಮೆಟ್ರಿಕ್ ಟನ್ ಸಾಮಥ್ರ್ಯದ ಶೀತಲ ಗೃಹಗಳ ನಿರ್ಮಾಣ.
ಹೊಸದಾಗಿ ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಪ್ರತಿ ಹೆಕ್ಟೇರಿಗೆ 5000 ರೂ.ಗಳಂತೆ ಗರಿಷ್ಠ 10,000 ರೂ. ನೆರವು.
ಕೊಳೆತು ಹೋಗಬಹುದಾದ ಹೂವು, ಹಣ್ಣು ತರಕಾರಿಗಳನ್ನು ಬೆಂಗಳೂರಿನಿಂದ ದೆಹಲಿ, ಮುಂಬಯಿ ಹಾಗೂ ತಿರುವನಂತಪುರಕ್ಕೆ ಸಾಗಿಸಲು ಕೇಂದ್ರ ಸರ್ಕಾರದ ʼಕೃಷಿ ರೈಲ್ʼ ಯೋಜನೆಯ ಸೌಲಭ್ಯದ ಬಳಕೆ.
ನೀರಾವರಿ
ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.
ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ.
ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ʼಕಿಂಡಿ ಅಣೆಕಟ್ಟು ಯೋಜನೆ”ಗಳ (Vented Dams) ವ್ಯಾಪಕ ಅನುಷ್ಠಾನ
ನಾಲ್ಕು ಲಕ್ಷ ಹೆಕ್ಟೇರ್‌ನಲ್ಲಿ 810 ಅತಿ ಸಣ್ಣ ಜಲಾನಯನಗಳಲ್ಲಿ ಜಲಾಮೃತ ಯೋಜನೆ ಅನುಷ್ಠಾನ.
ಅಟಲ್ ಭೂ-ಜಲ ಯೋಜನೆಯಡಿ 1202 ಕೋಟಿ ರೂ.ಗಳನ್ನು ಬಳಸಿಕೊಂಡು ರಾಜ್ಯದ ಆಯ್ದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಿಸುವುದು
ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸುವುದು
ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ
‘ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ; ಮೊದಲನೆಯ ಹಂತದ Lift component ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸುವುದು
ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನಾ ಜಲಾಶಯ ನಿರ್ಮಾಣದ ವಿಸ್ತೃತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ
ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ
ಮೀನುಗಾರಿಕೆ
ʼಮಹಿಳಾ ಮೀನುಗಾರರ ಸಬಲೀಕರಣʼ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.
ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.
ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.
ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ.
ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.
ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ.
ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.
ಶಿಕ್ಷಣ
ನೆರೆಯಿಂದ ಹಾನಿಗೊಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6569 ಕೊಠಡಿಗಳ ಕಾಮಗಾರಿಗೆ 758 ಕೋಟಿ
ತಿಂಗಳಿನ ಶನಿವಾರಗಳು ಬ್ಯಾಗ್ ರಹಿತ ʼಸಂಭ್ರಮ ಶನಿವಾರʼಗಳೆಂದು ಘೋಷಣೆ
400 ಉರ್ದು ಮಾಧ್ಯಮ ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಇಂಗ್ಲೀಷ್ ಮಾಧ್ಯಮ ಆರಂಭಿಸಲು ಒಂದು ಕೋಟಿ ಅನುದಾನ
ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿ ಸ್ವಾಯತ್ತಗೊಳಿಸಲು ಹತ್ತು ಕೋಟಿ ಅನುದಾನ
ಆರೋಗ್ಯ
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್ ಸೇವರ ವಿಸ್ತರಿಸಲು 19 ಕೋಟಿ ರೂ.
ಶಿರಸಿಯ ಸರ್ಕಾರಿ ಆಸ್ಪತ್ರೆಯನ್ನು 200 ಹಾಸಿಗೆಗಳ ಆಸ್ಪತ್ರಯಾಗಿ ಮೇಲ್ದರ್ಜೆಗೇರಿಸಲು ಕ್ರಮ
ʼಶ್ರವಣ ದೋಷ ಮುಕ್ತʼ ರಾಜ್ಯವಾಗಿಸಲು 28 ಕೋಟಿ ರೂ. ಅನುದಾನ
ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕ ಸ್ಥಾಪನೆ ಉದ್ದೇಶ. ಪ್ರಸಕ್ತ ಸಾಲಿನಲ್ಲಿ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ
ಹಾವೇರಿಯಲ್ಲಿ 20 ಹಾಸಿಗೆಗಳ ಆಯುಷ್ ಆಸ್ಪತ್ರೆ 20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ. ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ ಬಿಡುಗಡೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೂರು ಕೋಟಿ ರೂ ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಹಾಗೂ 30 ಲಕ್ಷ ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ನಿರ್ಮಾಣ
No comments:
Post a Comment
Note: only a member of this blog may post a comment.
No comments:
Post a Comment
Note: only a member of this blog may post a comment.